ಹೆಬ್ರಿ: ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

ಹೆಬ್ರಿ: ಹೊಳೆಗೆ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಹೆಬ್ರಿ ತಾಲ್ಲೂಕಿನ‌ ಶಿವಪುರ ಗ್ರಾಮದ ಬಟ್ರಾಡಿ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.

ನೀರುಪಾಲಾದವರನ್ನು ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (16) ಎಂದು ಗುರುತಿಸಲಾಗಿದೆ.

ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದು, ಈವರೆಗೂ ವಿದ್ಯಾರ್ಥಿಗಳು ಪತ್ತೆಯಾಗಿಲ್ಲ. ಹೆಬ್ರಿ ತಹಶೀಲ್ದಾರ್ ಪುರಂದರ್ ಕೆ, ಹೆಬ್ರಿ ಸಬ್ ಇನ್ಸ್ ಪೆಕ್ಟರ್ ಮಹೇಶ್, ಕಂದಾಯ ನಿರೀಕ್ಷಕ ಹಿತೇಶ್ ಯುಬಿ ಮತ್ತಿತರ ಅಧಿಕಾರಿಗಳು ಸ್ಥಳಕ್ಕೆ  ಧಾವಿಸಿದ್ದಾರೆ. ಅಗ್ನಿ ಶಾಮಕದಳ ಸಿಬ್ಬಂದಿ ಹಾಗೂ ಸ್ಥಳೀಯರು ವಿದ್ಯಾರ್ಥಿಗಳಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.