ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ; ದುರಂತದಲ್ಲಿ ಬೆಂಗಳೂರಿನ ಪೊಲೀಸ್‌ ಇನ್ಸ್‌ಪೆಕ್ಟರ್‌ ಸಾವು

ಚಮೋಲಿ (ಉತ್ತರಾಖಂಡ): ಉತ್ತರಾಖಂಡದ ಬದರಿನಾಥ ಧಾಮದಿಂದ ಫಾಟಾ ಕಡೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಜೋಶಿಮಠ ಸಮೀಪ ಪತನಗೊಂಡಿದ್ದು, ಬೆಂಗಳೂರಿನ ಐವರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಬೆಂಗಳೂರಿನ ಪೊಲೀಸ್ ಇನ್ಸ್‌ಪೆಕ್ಟರ್ ಅರುಣ್ ಸಾಲಂಕಿ ಕೂಡ ಸೇರಿದ್ದಾರೆ.

ಸ್ನೇಹಿತರು ಹಾಗೂ ಕುಟುಂಬಸ್ಥರೊಂದಿಗೆ ಚಾರ್‌ಧಾಮ್ ಯಾತ್ರೆಗೆ ತೆರಳಿದ್ದ ಅರುಣ್ ಸಾಲಂಕಿ ಅವರು ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದು, ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಘಟನೆ ತೀವ್ರ ಆಘಾತ ಮೂಡಿಸಿದೆ.

ಈ ದುರ್ಘಟನೆ ಕುರಿತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರತಿಕ್ರಿಯಿಸಿದ್ದು, ಜೋಶಿಮಠ ಸಮೀಪದ ಚಾಯಿ ಗ್ರಾಮದ ಬಳಿ ಸಂಭವಿಸಿರುವ ಹೆಲಿಕಾಪ್ಟರ್ ಅಪಘಾತ ದುರದೃಷ್ಟಕರ ಎಂದು ಹೇಳಿದ್ದಾರೆ.

ಜಿಲ್ಲಾಡಳಿತ, ವಿಪತ್ತು ನಿರ್ವಹಣಾ ಇಲಾಖೆ ಹಾಗೂ ಎಸ್‌ಡಿಆರ್‌ಎಫ್ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಘಟನೆಯ ಬಗ್ಗೆ ನಿರಂತರವಾಗಿ ನಿಗಾ ವಹಿಸಲಾಗಿದ್ದು, ಗಾಯಗೊಂಡವರನ್ನು ಉತ್ತಮ ಚಿಕಿತ್ಸೆಗಾಗಿ ತಕ್ಷಣವೇ ಏರ್‌ಲಿಫ್ಟ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಪ್ರಯಾಣಿಕರು ಸುರಕ್ಷಿತವಾಗಿ ಮರಳಲಿ ಎಂದು ಪ್ರಾರ್ಥಿಸುವುದಾಗಿ ಅವರು ಹೇಳಿದ್ದಾರೆ. ಈ ದುರಂತದಲ್ಲಿ ಆರು ಮಂದಿ ಮೃತಪಟ್ಟಿರುವುದು ಪ್ರವಾಸಿಗರು ಹಾಗೂ ಸಾರ್ವಜನಿಕರಲ್ಲಿ ತೀವ್ರ ದುಃಖ ಮೂಡಿಸಿದೆ..

ಹೆಲಿಕಾಪ್ಟರ್‌ನಲ್ಲಿದ್ದ ಪ್ರಯಾಣಿಕರು ಯಾರು?

ಪ್ರತಾಪ್, ಅರುಣ್, ಶಂಕರ್‌ಗೌಡ, ಸುಧೀರ್ ಕೆ. ಮತ್ತು ಎಚ್.ಎಸ್. ನಟರಾಜ್ ಸೇರಿದಂತೆ ಐವರು ಪ್ರಯಾಣಿಕರು ಹೆಲಿಕಾಪ್ಟರ್‌ನಲ್ಲಿದ್ದರು ಎಂದು ಮೂಲಗಳು ತಿಳಿಸಿವೆ. ಪೈಲಟ್‌ನ ಗುರುತು ಸೇರಿದಂತೆ ಘಟನೆಯ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

ಘಟನೆಯ ಕುರಿತು ಮಾಹಿತಿ ನೀಡಿರುವ ಚಮೋಲಿ ಜಿಲ್ಲಾಧಿಕಾರಿ ಗೌರವ್ ಕುಮಾರ್, ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಜೋಶಿಮಠದ ಸಮೀಪದ ಚಾಯಿ ಗ್ರಾಮದ ಬಳಿ ಹೆಲಿಕಾಪ್ಟರ್ ಪತನಗೊಂಡಿರುವುದು ದುರದೃಷ್ಟಕರ ಘಟನೆ ಎಂದು ಹೇಳಿದ್ದಾರೆ.

ಜಿಲ್ಲಾಡಳಿತ, ವಿಪತ್ತು ನಿರ್ವಹಣಾ ಇಲಾಖೆ ಹಾಗೂ ಎಸ್‌ಡಿಆರ್‌ಎಫ್ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಘಟನೆಯ ಮೇಲೆ ನಿರಂತರ ನಿಗಾ ಇರಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಉತ್ತಮ ಚಿಕಿತ್ಸೆಗಾಗಿ ತಕ್ಷಣವೇ ಏರ್‌ಲಿಫ್ಟ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರಯಾಣಿಕರು ಸುರಕ್ಷಿತವಾಗಿ ಮರಳಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರ ಸ್ಥಿತಿ ಹಾಗೂ ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ಅಧಿಕೃತ ಮಾಹಿತಿ ನಿರೀಕ್ಷಿಸಲಾಗುತ್ತಿದೆ.