ಹೊಸಪೇಟೆ (ವಿಜಯನಗರ): ಹಂಪಿಯ ಐತಿಹಾಸಿಕ
ವಿರೂಪಾಕ್ಷ ಹಾಗೂ ವಿಜಯ ವಿಠಲ ದೇಗುಲ ಸಂರಕ್ಷಣೆಗಾಗಿ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರು ತಮ್ಮ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 490 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡಿದ್ದಾರೆ.
ಶುಕ್ರವಾರ ಹಂಪಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಅವರು, ಗುಣಮಟ್ಟದ ಕಾಮಗಾರಿ ನಡೆಸಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ವಚ್ಛತೆ ಕುರಿತು ಅಸಮಮಾಧಾನ ವ್ಯಕ್ತಪಡಿಸಿದರು.















