ಚುನಾವಣಾ ಅಕ್ರಮಗಳ ದೂರು ಸಲ್ಲಿಸಲು ಸಹಾಯವಾಣಿ ಪ್ರಾರಂಭ

ಉಡುಪಿ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು
ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಕರನ್ನಾಗಿ ಹಿತೇಶ್ ಕೆ ಕೋಯಲ್ ಅವರನ್ನು ನೇಮಕ ಮಾಡಲಾಗಿರುತ್ತದೆ.

ಸದ್ರಿ ಚುನಾವಣಾ ವೀಕ್ಷಕರ ಕಛೇರಿಯನ್ನು ನಗರದ ಬನ್ನಂಜೆಯ ಪ್ರವಾಸಿ ಮಂದಿರದಲ್ಲಿ ತೆರೆಯಲಾಗಿದ್ದು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ದೂ.ಸಂಖ್ಯೆ: 0820-2001203, ಮೊ.ನಂ:9482245032 ಗೆ ಪ್ರತಿದಿನ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.