ಜೆ.ಇ ಲಸಿಕೆ ಕುರಿತ ಮಾಹಿತಿಗಾಗಿ ಸಹಾಯವಾಣಿ ಪ್ರಾರಂಭ

ಉಡುಪಿ: ಜಿಲ್ಲೆಯಲ್ಲಿ ಡಿಸೆಂಬರ್ 5 ರಿಂದ 24 ರ ವರೆಗೆ ಜೆ.ಇ ಲಸಿಕಾ ಅಭಿಯಾನ ನಡೆಯಲಿದ್ದು, ಈ ಕುರಿತು ಮಕ್ಕಳ ಪೋಷಕರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ಒದಗಿಸುವ ಸಲುವಾಗಿ ಸಹಾಯವಾಣಿ ಸಂಖ್ಯೆ: 9449843213 ಅನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.