ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಗೆ ಆಯ್ಕೆ

ಹೆಮ್ಮಾಡಿ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಜೇತರಾದ ಕಾಲೇಜಿನ ವಿದ್ಯಾರ್ಥಿಗಳಾದ (ಬಾಲಕರ ವಿಭಾಗ) ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರಜ್ವಲ್ ಪೂಜಾರಿ, ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ರುಪಿನ್, ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರಜ್ವಲ್ ಜಿ., ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ರಿತೇಶ್ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಸಂಜನಾ ಕಟ್ಟೆ, ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅರ್ಫಾ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.