ಕುಂದಾಪುರ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪ.ಪೂ ಕಾಲೇಜು 100% ಫಲಿತಾಂಶ ದಾಖಲಿಸಿದೆ.
ವಿಜ್ಞಾನ ವಿಭಾಗದ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯಕ್ಕೆ 6 ನೇ ಸ್ಥಾನ ಪಡೆದಿದ್ದಾಳೆ.
ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಾಲೇಜಿನ ಪ್ರಾರಂಭದ ವರ್ಷದಲ್ಲಿಯೇ ದ್ವಿತೀಯ ಪಿಯುಸಿಗೆ ದಾಖಲಾದ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದಾರೆ.