ಹೆಮ್ಮಾಡಿ: ಮಹಿಳಾ ಮತ್ತು ಮಕ್ಕಳ ಹಿತರಕ್ಷಣಾ ಅರಿವು ಕಾರ್ಯಕ್ರಮ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ, ಮಕ್ಕಳ ಸಹಾಯವಾಣಿ ಉಡುಪಿ. ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಫೋಕ್ಸೋ ಕಾಯ್ದೆ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಟ ತಡೆ ಹಾಗೂ ಮಕ್ಕಳ ಸಹಾಯವಾಣಿಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು‌ ಹಾಗೂ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ‌ ಮೊಗವೀರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಕಂಡ್ಲೂರು ಪೋಲಿಸ್ ಠಾಣೆಯ ವ್ರತ್ತ ನಿರೀಕ್ಷಕರಾಗಿರುವ ಶ್ರೀ ನಿರಂಜನ್ ರವರು ಸೈಬರ್ ಕ್ರೈಮ್ ಹಾಗೂ‌ ಸಾಮಾಜಿಕ ಜಾಲತಾಣಗಳ ಕುರಿತು ಮಾಹಿತಿ‌ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳಾಗಿರುವ ಶ್ರೀ ಮಹೇಶ ದೇವಾಡಿಗರವರು ಬಾಲ್ಯ ವಿವಾಹ ತಡೆ ಕುರಿತು ಮಾಹಿತಿ ನೀಡಿದರು. 1098 ಮಕ್ಕಳ ಸಹಾಯವಾಣಿ ಕೇಂದ್ರ ಸಂಯೋಜಕಿ‌ ಜ್ಯೋತಿ ‌ಇವರು ಮಕ್ಕಳ ಸಹಾಯವಾಣಿ ಹಾಗೂ ಪೋಕ್ಸೋ ಕಾಯ್ದೆಯ ಕುರಿತು ಮಾಹಿತಿ ನೀಡಿದರು.

ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಆಡಳಿತಾಧಿಕಾರಿಗಳು ಹಾಗೂ‌ ಕಾಲೇಜಿನ‌ ದೈಹಿಕ ಶಿಕ್ಷಣ ನಿರ್ದೇಶಕರಾಗಿರು‌ವ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ, ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಮಂಜು ಕಾಳವಾರ, ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಅನುಷಾ ಉಪಸ್ಥಿತರಿದ್ದರು‌. ಕಾಲೇಜಿನ ಪ್ರಾಂಶುಪಾಲರು ಸ್ವಾಗತಿಸಿ, ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.