ಸಚಿವ ಸಂಪುಟ ವಿಸ್ತರಣೆಯಲ್ಲಿ ಹೈಡ್ರಾಮಾ: ಪಟ್ಟಿಯಲ್ಲಿದ್ದರೂ ಮಂಕಾಳು ವೈದ್ಯಗೆ ಸಿಗದ ಮಂತ್ರಿಗಿರಿ

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ರಾಜಕಾರಣದಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಎಐಸಿಸಿ ಪ್ರಕಟಿಸಿದ ನೂತನ ಸಚಿವರ ಪಟ್ಟಿಯಲ್ಲಿ ಹೆಸರಿದ್ದರೂ, ಕೊನೇ ಕ್ಷಣದಲ್ಲಿ ಮಂತ್ರಿ ಸ್ಥಾನ ಕೈತಪ್ಪಿದೆ.

ಬೆಂಗಳೂರು, ಆಗಸ್ಟ್ 03: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಎಐಸಿಸಿ ಪ್ರಕಟಿಸಿದ 20 ನೂತನ ಸಚಿವರ ಪಟ್ಟಿಯಲ್ಲಿ ಹೆಸರಿದ್ದರೂ ಕೊನೇ ಕ್ಷಣದಲ್ಲಿ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳು ವೈದ್ಯ ಅವರಿಗೆ ಮಂತ್ರಿ ಸ್ಥಾನ ಕೈತಪ್ಪಿದೆ.
ಮಂತ್ರಿಗಳ ಪಟ್ಟಿ ಬಿಡುಗಡೆಯಾದ ಬಳಿಕ ನಡೆದ ಈ ಅಚ್ಚರಿಯ ಬೆಳವಣಿಗೆಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಿದೆ.
ನೂತನ ಸಚಿವರ ಮೂಲ ಪಟ್ಟಿಯಲ್ಲಿ ಮಂಕಾಳು ವೈದ್ಯ ಅವರ ಹೆಸರು ಇರಲಿಲ್ಲ. ಮಾಧ್ಯಮಗಳಿಗೆ ನೀಡಿದ ಪಟ್ಟಿಯಲ್ಲಿ ಅವರ ಹೆಸರು ಬಂದಿರುವುದು ಕೇವಲ ‘ಟೈಪಿಂಗ್ ಮಿಸ್ಟೇಕ್’ ಎಂದು ಎಐಸಿಸಿ ತಿಳಿಸಿದೆ. ಮಂಕಾಳು ವೈದ್ಯ ಅವರ ಬದಲಿಗೆ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.