ಉಡುಪಿ ದುರ್ಗಾ ಇಂಟರ್ ನ್ಯಾಶನಲ್ ಹೊಟೇಲ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ: ಮೂವರ ಬಂಧನ

ಉಡುಪಿ: ಇಲ್ಲಿನ ಸಿಟಿ ಬಸ್ ನಿಲ್ದಾಣದ ಬಳಿ ಇರುವ ದುರ್ಗಾ ಇಂಟರ್ ನ್ಯಾಶನಲ್ ಹೊಟೇಲಿನ ರೂಮ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿದ್ದು, ಖಚಿತ ಮಾಹಿತಿ ಆಧಾರಿಸಿ ದಾಳಿ ನಡೆಸಿದ ಡಿಸಿಐಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಶೇಖರ ಶೆಟ್ಟಿ, ಜೋನ್ಸನ್ ಡಿ ಅಲ್ಮೇಡ , ಹರ್ಷಿತ್ ಶೆಟ್ಟಿ ಬಂಧಿತ ಆರೋಪಿಗಳು‌. ಬಂಧಿತ ಆರೋಪಿಗಳು ಮನು, ರಾಜು ಮತ್ತು ಉದ್ಯಮಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಎಂಬವರು ಒಟ್ಟು ಸೇರಿ ಹೊಟೇಲಿನ ರೂಪಿನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ.

ಕೃತ್ಯಕ್ಕೆ ಸಂಬಂಧಿಸಿದಂತೆ 4 ಮೊಬೈಲ್ ಫೋನ್, ₹6730 ನಗದು ಹಾಗು ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.