ಬೆಂಗಳೂರು: ಶೈಕ್ಷಣಿಕ ಕ್ಷೇತ್ರದ ಸಮವಸ್ತ್ರ ನಿಯಮದ ಕುರಿತಂತೆ ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ. ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನ್ವಯ ಶಾಲಾ, ಕಾಲೇಜುಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರದ ನಿಯಮಗಳನ್ನು ಪಾಲಿಸುವಂತೆ ಆದೇಶ ಹೊರಡಿಸಿದೆ.
ಕರ್ನಾಟಕ ಶಿಕ್ಷಣ ಕಾಯ್ದೆ 1983 ನಿಯಮದನ್ವಯ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸತಕ್ಕದ್ದು, ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿಗಳು ನಿರ್ಧರಿಸುವಂತಹ ಸಮವಸ್ತ್ರವನ್ನು ಧರಿಸತಕ್ಕದ್ದು ಎಂಬ ಆದೇಶ ನೀಡಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಆಯಾ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿಯ ಮೇಲ್ವಿಚಾರಣಾ ಸಮಿತಿಯ ನಿರ್ಧರಿಸುವಂತಹ ಸಮವಸ್ತ್ರಗಳನ್ನು ಧರಿಸುವುದು.
ಆಡಳಿತ ಮಂಡಳಿಗಳು ಸಮವಸ್ತ್ರಗಳನ್ನು ನಿಗದಿಪಡಿಸದೆ ಇದ್ದಲ್ಲಿ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪುಗಳನ್ನು ಧರಿಸುವ ತಕ್ಕದ್ದು ಎಂದು ಸರ್ಕಾರ ಆದೇಶಿಸಿದೆ. ಆ ಮೂಲಕ ಸಮವಸ್ತ್ರದ ಕುರಿತಂತೆ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದೆ.