ವಾಶ್ ರೂಂನಲ್ಲಿ ವೀಡಿಯೋ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಉಡುಪಿ: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಹೇಯ ಕೃತ್ಯವನ್ನು ಖಂಡಿಸಿ, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ, ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್, ಉಡುಪಿ ಜಿಲ್ಲಾ ಬಜರಂಗದಳ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ಜೋಡುಕಟ್ಟೆಯಿಂದ ಪ್ರಾರಂಭಗೊಂಡು ಶ್ರೀ ಕೃಷ್ಣ ಮಠದ ಹಿಂಭಾಗದಲ್ಲಿರುವ ಪಾರ್ಕಿಂಗ್ ವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಸುನಿಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಮಾಜಿ ಶಾಸಕ ರಘುಪತಿ ಭಟ್, ಮಟ್ಟಾರು ರತ್ನಾಕರ್ ಹೆಗ್ಡೆ, ಪರಿಷತ್ತಿನ ಪದಾಧಿಕಾರಿಗಳು, ಬಜರಂಗದಳದ ಕಾರ್ಯಕರ್ತರು ಉಪಸ್ಥಿತರಿದ್ದರು.