ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಇಲಾಖೆ: ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ

ಉಡುಪಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಸಂಸ್ಥೆಗಳ 7 ಅಧಿಸೂಚಿತ ಸಂಸ್ಥೆಗಳಿಗೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಸಾರ್ವಜನಿಕರು ಹಾಗೂ ಭಕ್ತಾಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಧಿಸೂಚಿತ ಸಂಸ್ಥೆಗಳು: ಉಡುಪಿ ತಾಲೂಕು ಕುಂಜೂರು ಶ್ರೀ ದುರ್ಗಾದೇವಿ ದೇವಸ್ಥಾನ ಹಾಗೂ ಮರ್ಣೆ ಶ್ರೀ ಅಬ್ಬಗದಾರಗ ಬೂತ ದೇವಸ್ಥಾನ, ಕುಂದಾಪುರದ ಹಾರ್ದಳ್ಳಿ- ಮಂಡಳ್ಳಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ವಕ್ವಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಕಂಬದಕೋಣೆ ಶ್ರೀ ಕೊಕ್ಕೇಶ್ವರ ದೇವಸ್ಥಾನ, ಬೈಂದೂರು ತಾಲೂಕು ಕೆರ್ಗಾಲ್ ನಂದನವನ ಶ್ರೀ ಮಹಾಬಲೇಶ್ವರ ದೇವಸ್ಥಾನ ಮತ್ತು ಹೆಬ್ರಿ ತಾಲೂಕು ಮುದ್ರಾಡಿ ಶ್ರೀ ಆಲಿಗುಂಡಿ ಬ್ರಹ್ಮಸ್ಥಾನ.

ಕನಿಷ್ಠ 25 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಇಲಾಖೆ, ರಜತಾದ್ರಿ, ಮಣಿಪಾಲ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.