ಕುಂದಾಪುರ: ಶಂಕರನಾರಾಯಣದ ಖಾಸಗಿ ಶಾಲೆಯೊಂದು ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟವನ್ನು ಆಯೋಜಿಸಿತ್ತು. ಉದ್ಘಾಟನಾ ಸಮಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳು ಸ್ವಾಗತ ನೃತ್ಯ ಪ್ರದರ್ಶಿಸಿದ್ದರು. ಕ್ರೀಡೋತ್ಸವ ಪ್ರಾರಂಭಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಸುಮಾರು 30 ಸೆಕೆಂಡ್ ಗಳ ಕಾಲ ಅಜಾನ್ ಕೂಗಿಗೆ ಹಿಂದೂ ವಿದ್ಯಾರ್ಥಿಗಳ ಬಳಿ ನಮಾಜ್ ಮಾಡಿಸಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದ್ದು, ಹಿಂದೂ ವಿದ್ಯಾರ್ಥಿಗಳ ಮೇಲೆ ಒತ್ತಾಯ ಪೂರ್ವಕವಾಗಿ ಇಸ್ಲಾಂ ಆಚರಣೆಗಳನ್ನು ಹೇರಿಕೆ ಮಾಡಲಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ಶಂಕರನಾರಾಯಣ ಘಟಕ
ಆರೋಪಿಸಿದೆ. ಶಾಲಾ ಆಡಳಿತ ಮಂಡಳಿಯ ಈ ನಡೆಯ ವಿರುದ್ದ ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ವಠಾರದಲ್ಲಿ ಪ್ರತಿಭಟನೆ ನಡೆಸಲು ಹಿಂಜಾವೇ ನಿರ್ಧರಿಸಿದೆ.
ಅಜಾನ್ ಕೂಗಿಗೆ ಮಕ್ಕಳು ನಮಾಜ್ ಮಾಡುವ ದೃಶ್ಯದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇವರಲ್ಲಿ ಕೆಲವು ಹಿಂದೂ ವಿದ್ಯಾರ್ಥಿಯನಿರುವುದು ಆಕ್ರೋಶಕ್ಕೆ ಕಾರಣವಾಗಿದ್ದು, ಹಿಂದೂ ಸಂಘಟನೆಗಳಿಂದ ಆಕ್ಷೇಪ ವ್ಯಕ್ತವಾಗಿದೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಲಾ ಮುಖ್ಯೋಪಾಧ್ಯಾಯಿನಿ ತಮ್ಮಿಂದ ತಪ್ಪಾಗಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಯಾರ ಮನಸ್ಸಿಗೂ ನೋವುಂಟು ಮಾಡುವ ಉದ್ದೇಶದಿಂದ ಇದನ್ನು ಮಾಡಲಾಗಿಲ್ಲ ಎಂದು ಅವರು ಹೇಳಿದ್ದಾರೆ. ವಿಷಯವನ್ನು ಶಾಲಾ ಶಿಕ್ಷಣಾಧಿಕಾರಿಯವರ ಗಮನಕ್ಕೂ ತರಲಾಗಿದ್ದು, ಆಡಳಿತ ಮಂಡಳಿಯ ಬಳಿ ಮಾತನಾಡುವುದಾಗಿ ತಿಳಿಸಿದ್ದಾರೆ.