ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉಡುಪಿ, ಜೂನ್ 14: ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ, ಬನ್ನಂಜೆ, ಬಾರ್ಕೂರು, ಮಣಿಪಾಲ, ಆದಿ ಉಡುಪಿ, ಕಿನ್ನಿಮೂಲ್ಕಿ, ಬಡಗಬೆಟ್ಟು, ಕಾಪು, ಹಿರಿಯಡ್ಕ, ಬಲಾಯಿಪಾದೆಯಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸ್/ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಪ್ರವರ್ಗ 1, 2ಎ, 3ಎ, 3ಬಿ, ಪ.ಜಾತಿ ಮತ್ತು ಪ.ಪಂಗಡಗಳ ವಿದ್ಯಾರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ, ಪ್ರವರ್ಗ 2ಎ, 3ಎ, 3ಬಿ ಗೆ ಸೇರಿದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ರೂ. ಒಳಗಿರಬೇಕು.
ಪ್ರವೇಶ ಪಡೆಯ ಬಯಸುವ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಜಾತಿ/ ಆದಾಯ ಪ್ರಮಾಣ ಪತ್ರ, 2018-19 ನೇ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ ನಿಲಯಕ್ಕೆ ಇರುವ ದೂರದ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಪಡೆದ ಪ್ರಮಾಣ ಪತ್ರ, 2 ಫೋಟೋಗಳೊಂದಿಗೆ ನಿಗಧಿತ ನಮೂನೆಯಲ್ಲಿ ಅರ್ಜಿಯನ್ನು ಜುಲೈ 12 ರ ಒಳಗೆ ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಬೇಕು.

ಅರ್ಜಿಗಳನ್ನು ಅಪ್‍ಲೋಡ್ ಮಾಡಿದ ನಂತರ ಕಂಪ್ಯೂಟರ್ ಪ್ರಿಂಟ್ ಸಹಿತ ದಾಖಲೆಗಳ ಪ್ರತಿಯನ್ನು ಸಂಬಂಧಿಸಿದ ನಿಲಯಗಳ ಮೇಲ್ವೀಚಾರಕರಿಗೆ ಅಥವಾ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಗೆ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2520739, ವೆಬ್‍ಸೈಟ್ backwardclasses.kar.nic.in ಅನ್ನು ಸಂಪರ್ಕಿಸುವಂತೆ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.