ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ ಇಲ್ಲಿಯ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗ ಹೋಳಿಯನ್ನು ಸೋಮವಾರ ವಿಶಿಷ್ಟ ರೀತಿಯಲ್ಲಿ ಆಚರಿಸಿತು.
ಪ್ರಥಮ ವರ್ಷದ ಎಂ.ಕಾಂ. ವಿದ್ಯಾರ್ಥಿಗಳಿಗೆ ಬ್ರ್ಯಾಂಡ್ ರಂಗೋಲಿ ಸ್ಪರ್ಧೆಯನ್ನು ನಡೆಸುವ ಮೂಲಕ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರಲಾಯಿತು. ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಸ್ಪರ್ಧೆಯ ಸಂಘಟಕ ಪ್ರೊ. ಆನಂದ್ ಎಂ. ಬಿ. ತಮ್ಮ ಪ್ರಾಸ್ತಾವಿಕ ಮಾತುಗಳಲ್ಲಿ ಸ್ಪರ್ಧೆಯ ಮಹತ್ವವನ್ನು ಮನವರಿಕೆ ಮಾಡಿಕೊಟ್ಟರು.
ವಿದ್ಯಾರ್ಥಿಗಳು ವಿವಿಧ ಕಂಪನಿಗಳ ಬ್ರ್ಯಾಂಡ್ಗಳನ್ನು ರಂಗೋಲಿ ಮೂಲಕ ಬಿಡಿಸಿ, ಆಯಾ ಕಂಪನಿಯ ಬಗೆಗೆ ಔಚಿತ್ಯ ಪೂರ್ಣವಾಗಿ ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನರವರು ವಿವಿಧ ಬ್ರ್ಯಾಂಡ್ನ ರಂಗೋಲಿಗಳನ್ನು ವೀಕ್ಷಿಸಿ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಮಾತುಗಳನ್ನು ನುಡಿದರು.
ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ದಿನೇಶ್ ಎಂ., ಉಪನ್ಯಾಸಕರಾದ ಆಶಾ, ಮೋಹನ್ ಬಿ.ಎಸ್., ಕಾಲೇಜಿನ ಉಪನ್ಯಾಸಕರು, ಕಚೇರಿ ಸಿಬ್ಬಂದಿಗಳು, ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಉಪಸ್ಥಿತರಿದ್ದರು.