ಉಡುಪಿ, ಜುಲೈ 1: ಹಿರಿಯಡ್ಕದ ಸರಕಾರಿ ಪ್ರಥಮ ದರ್ಜೆ ಕಾಲೇಜು ಜೂನ್ 25 ರಂದು ಯು.ಜಿ.ಸಿ. ಕಾಯ್ದೆ 1956ರ 12 ಬಿ ಕಲಂ ಅಡಿಯಲ್ಲಿ ಮಾನ್ಯತೆ ಪಡೆದಿದೆ. ಕಾಲೇಜು ಈಗ ಕೇಂದ್ರ ಸರ್ಕಾರದಿಂದ ಬರುವ ಹಣಕಾಸಿನ ನೆರವು ಪಡೆಯಲು ಅರ್ಹವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












