ಉಡುಪಿ: ಐಕ್ಯುಎಸಿ ಹಾಗೂ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಿಂದ ಇತ್ತೀಚೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ ಇಲ್ಲಿ ‘ಕ್ರೀಡೆ ಹಾಗೂ ಶಾರೀರಿಕ ಚಟುವಟಿಕೆಗಳ ಬಗ್ಗೆ ಯುವ ಜನಾಂಗ ದೃಷ್ಟಿಕೋನ” ಎಂಬ ವಿಷಯದ ಬಗ್ಗೆ ವಿಶೇಷ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಬಾರ್ಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಮೆಮೋರಿಯಲ್ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ಬೋಧಕರಾದ ಜಯಭಾರತಿ ಎ. ಮಾತನಾಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯುವ ಜನರು ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ವಹಿಸಿದ್ದರು.
ಐಕ್ಯುಎಸಿ ಸಂಚಾಲಕಿ ಸುಮನಾ ಬಿ. ಹಾಗೂ ಕ್ರೀಡಾ ಕಾರ್ಯದರ್ಶಿ ಸಚಿನ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕಿ ಸವಿತಾ ಸ್ವಾಗತಿಸಿದರು. ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು, ಕ್ರೀಡಾ ಕಾರ್ಯದರ್ಶಿ ಪ್ರತಿಮಾ ವಂದಿಸಿದರು.