ಉಡುಪಿ, ಜುಲೈ 1: ಲಯನ್ಸ್ ಕ್ಲಬ್ ಹಾಗೂ ಮಣಿಪಾಲದ ಕೆ.ಎಂ.ಸಿ. ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರವು ಇತ್ತೀಚೆಗೆ ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.
ಸೆಕೆಂಡ್ ವೈಸ್ ಲಯನ್ ಡಿಸ್ಟ್ರಿಕ್ಟ್ ಗವರ್ನರ್ ವಿಶ್ವನಾಥ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಉಚಿತ ದಂತ ಚಿಕಿತ್ಸಾ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.
ಹಿರಿಯಡಕ ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನದಾಸ್ ಆಚಾರ್ಯ ಮಾತನಾಡಿ, ಲಯನ್ ಕ್ಲಬ್ ಒಂದು ಅಂತಾರಾಷ್ಟ್ರೀಯ ಸಂಸ್ಥೆಯಾಗಿದ್ದು, ಸೇವೆ, ಸ್ನೇಹ, ನಾಯಕತ್ವ ಅದರ ಮೂಲತತ್ತ್ವಗಳಾಗಿವೆ ಎಂದು ತಿಳಿಸಿದರು.
ಕೆ.ಎಂ.ಸಿ. ಮಣಿಪಾಲದ ದಂತ ವೈದ್ಯ ಡಾ| ಸಮಂತಾ ಆಳ್ವ ಉಚಿತ ದಂತ ಚಿಕಿತ್ಸಾ ಶಿಬಿರದ ವಿಧಾನವನ್ನು ಮನವರಿಕೆ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ, ಹಲ್ಲಿನ ಸಂರಕ್ಷಣೆಗೆ ವಿಶೇಷ ಗಮನ ಹರಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್‍ನ ಕಾರ್ಯದರ್ಶಿ ಸುಂದರಕಾಂಚನ್, ಖಜಾಂಚಿಗಳಾದ ಬಾಲಕೃಷ್ಣ ಹೆಗ್ಡೆ, ಹಿಂದಿನ ಅಧ್ಯಕ್ಷರಾದ ರವೀಂದ್ರನಾಥ್ ಹೆಗ್ಡೆ, ಬಾಲಕೃಷ್ಣ ಶೆಟ್ಟಿ, ರೆಡ್‍ಕ್ರಾಸ್ ಕಾರ್ಯಕ್ರಮಾಧಿಕಾರಿ ಡಾ.ರಾಘವೇಂದ್ರ ಪಿ ಕೆ, ರೋವರ್ ಘಟಕದ ಸಂಚಾಲಕ ಅನಿಲ್‍ಕುಮಾರ್ .ಕೆ .ಎಸ್. ಹಾಗೂ ರೇಂಜರ್ ಘಟಕದ ಸಂಚಾಲಕಿ ಸವಿತಾ, ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುಜಯಾ ಕೆ.ಎಸ್. ಸ್ವಾಗತಿಸಿ, ಎನ್.ಎಸ್.ಎಸ್. ಯೋಜನಾಧಿಕಾರಿ ಸುಭಾಷ್‍ಎಚ್.ಕೆ.ವಂದಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ಪ್ರವೀಣ ಶೆಟ್ಟಿ ನಿರೂಪಿಸಿದರು.