Home Trending ಹಿರಿಯ ಪತ್ರಕರ್ತೆ ಡಾ.ಸೀತಾಲಕ್ಷ್ಮೀ ಕರ್ಕಿಕೋಡಿ ನಿಧನ

ಹಿರಿಯ ಪತ್ರಕರ್ತೆ ಡಾ.ಸೀತಾಲಕ್ಷ್ಮೀ ಕರ್ಕಿಕೋಡಿ ನಿಧನ

ಮಂಗಳೂರು:  ಹಿರಿಯ ಪತ್ರಕರ್ತೆ  ಡಾ. ಸೀತಾಲಕ್ಷ್ಮೀ ಕರ್ಕಿಕೋಡಿ ಮಂಗಳೂರಿನ ಆಸ್ಪತ್ರೆಯಲ್ಲಿ ಮಂಗಳವಾರ ಕೊನೆಯುಸಿರೆಳೆದರು.
ಅವರು ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಕಳೆದ ಹಲವು ವರ್ಷಗಳಿಂದ ತಂದೆ, ಸಾಹಿತಿ ವಿ.ಗ ನಾಯಕ ಮತ್ತು ತಾಯಿ ಜತೆ ಮಂಗಳೂರಿನ ಕೊಟ್ಟಾರ ಚೌಕಿಯ ಬಳಿ ವಾಸವಾಗಿದ್ದರು. ವಿಜಯ ಕರ್ನಾಟಕ ಪತ್ರಿಕೆಯಲ್ಲಿ‌ ಉಪ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದರು.
ಇವರ ಕುಟುಂಬ ಮೂಲತ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕರ್ಕಿಕೋಡಿಯವರು.
ಪ್ರತಿಭಾನ್ವಿತೆಯಾಗಿದ್ದ ಸೀತಾ, ಕನ್ನಡ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿದ್ದರು.
error: Content is protected !!