ಹಿರಿಯಡಕ: ನಾಲ್ಕು ದಿನಗಳ ಹಿಂದೆ ಹಿರಿಯಡ್ಕದ ಕೋಟ್ನಕಟ್ಟೆಯಿಂದ ನಾಪತ್ತೆಯಾಗಿದ್ದ 67 ವರ್ಷದ ಬಿ. ಪ್ರಕಾಶ ಪೈ ಅವರ ಮೃತದೇಹ ಕುಕ್ಕೆಹಳ್ಳಿಯ ಹಾಡಿಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ.
ಮೃತದೇಹದ ಪಕ್ಕದಲ್ಲಿ ವಿಷದ ಬಾಟಲಿ ಪತ್ತೆಯಾಗಿದ್ದು, ಪ್ರಕಾಶ್ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.
ಜೂ.13ರಂದು ಉಡುಪಿಯ ಸರ್ವೀಸ್ ಬಸ್ ನಿಲ್ದಾಣದ ಬಳಿಯ ಡಾ. ಆರ್.ಎನ್ ಭಟ್ ಅವರ ಕ್ಲಿನಿಕ್ ಗೆ ಚಿಕಿತ್ಸೆಗಾಗಿ ಹೋಗಿದ್ದ ಪ್ರಕಾಶ ಪೈ ಅವರು ನಾಪತ್ತೆಯಾಗಿದ್ದಾರೆ ಎಂದು ಪುತ್ರ ಹಿರಿಯಡ್ಕ ಠಾಣೆಯಲ್ಲಿ ದೂರು ದಾಖಲಿಸಿದ್ದರು.












