ಹಿರಿಯಡಕ: ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಉದ್ಘಾಟನೆ

ಹಿರಿಯಡಕ: ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ನೂತನ ಕೊಠಡಿಯ ಉದ್ಘಾಟನೆಯನ್ನು ಇಂದು(ಸೆ.11) ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಶಾಸಕರು ಮಾತನಾಡಿ ಇಂದಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿ ಮುಚ್ಚುವ ಸ್ಥಿತಿಗೆ ತಲುಪಿದೆ. ಇಂತಹ ಸಂದರ್ಭದಲ್ಲಿ ಕಾಜಾರಗುತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 200 ಕ್ಕೂ ಅಧಿಕ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ಶ್ಲಾಘನೀಯ ಇಂತಹ ಶಾಲೆಗಳ ಅಭಿವೃದ್ಧಿಗೆ ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು ಹಾಗೂ ಶಾಲೆಗೆ ಬೇಕಾದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಉಪಾಧ್ಯಕ್ಷರಾದ ಇಂದಿರಾ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ವಿಷ್ಣುಮೂರ್ತಿ ಶೌಡೆ, ಹಳೆ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷರಾದ ದೇವೇಂದ್ರ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ್ ಕಾಮತ್, ಡಯಟ್ ನ ಜ್ಞಾನವಿ ಹಾಗೂ ಶಾಲೆಯ ಮುಖ್ಯ ಶಿಕ್ಷಕರು, ಅಧ್ಯಾಪಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.