ಹಿರಿಯಡಕ: ಕಾಲೇಜು ವಾರ್ಷಿಕೋತ್ಸವ ಸಮಾರಂಭ

 ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕದ ಕಾಲೇಜು ವಾರ್ಷಿಕೋತ್ಸವ ಸಮಾರಂಭವು ಫೆ.26 ರಂದು ನಡೆಯಿತು.

 ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ,ವೀರಯೋಧರ ತ್ಯಾಗ, ಬಲಿದಾನದ ಸ್ಮರಣೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು ಎಂದು ತಿಳಿಸಿದರು. ನಿವೃತ್ತ ಬಿ.ಎಸ್.ಎಫ್. ಯೋಧ ಕುಶ ಸಾಲ್ಯಾನ್ ತಮ್ಮ ಸೇನಾ ಅನುಭವವನ್ನು ಹಂಚಿಕೊಂಡರು.

     ಪ್ರಧಾನ ಭಾಷಣಕಾರರಾಗಿ  ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಳೆಯಂಗಡಿಯ ಪ್ರಾಂಶುಪಾಲ ಡಾ. ಪಿ. ಬಿ. ಪ್ರಸನ್ನ ಮಾತನಾಡಿ,  ಭಾಷೆ, ಸಾಹಿತ್ಯದ ಜ್ಞಾನ ಬದುಕಿಗೆ ಅವಶ್ಯಕವೆಂದು ತಿಳಿಸಿ, ಸಾಹಿತ್ಯದ ಪ್ರೀತಿ ಬೆಳೆಸಿಕೊಳ್ಳಬೇಕು ಎಂದರು.

     ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಕಾಲೇಜು ವರದಿಯನ್ನು ವಾಚಿಸಿದರು. ಕಾರ್ಯಕ್ರಮದಲ್ಲಿ ವಿಶ್ರಾಂತ ಪ್ರಾಂಶುಪಾಲ ಡಾ. ಪಾದೇಕಲ್ಲು ವಿಷ್ಣು ಭಟ್ಟ, ಜಿಲ್ಲಾ ಪಂಚಾಯತ್ ಸದಸ್ಯೆ ಚಂದ್ರಿಕಾ ಸಿ.ಜೆ., ತಾಲೂಕು ಪಂಚಾಯತ್ ಸದಸ್ಯ ಲಕ್ಷ್ಮೀನಾರಾಯಣ ಪ್ರಭು, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ನಾಯಕ್, ಉಪಾಧ್ಯಕ್ಷ ಹರೀಶ್ ಸಾಲ್ಯಾನ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ರಾಮದಾಸ್ ಐತಾಳ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಶೋಕ ಆಚಾರ್ಯ, ಶಿಕ್ಷಣ ತಜ್ಞ ಡಾ. ಎನ್.ಎಸ್.ಶೆಟ್ಟಿ ಉಪಸ್ಥಿತರಿದ್ದರು.

     ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಸುಮನಾ ಬಿ. ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸುಜಯಾ ಕೆ. ಎಸ್. ಸ್ವಾಗತಿಸಿದರು. ವಿದ್ಯಾರ್ಥಿ ವೇದಿಕೆಯ ಅಧ್ಯಕ್ಷ ಹರ್ಷಿತ್ ಶೆಟ್ಟಿ ಸಂದೇಶ ವಾಚಿಸಿದರು. ಉಪಾಧ್ಯಕ್ಷ ದೀಪಕ್ ಶೆಟ್ಟಿ ವಂದಿಸಿದರು.

     ಕಾರ್ಯಕ್ರಮದಲ್ಲಿ ಶೈಕ್ಷಣಿಕ, ಸಾಂಸ್ಕøತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಕೆಲವು ವಿಶೇಷ ಪುರಸ್ಕಾರಗಳನ್ನು ನೀಡಿ ಗೌರವಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಿತು.