ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ: ಹಿರಿಯಡ್ಕ ಸರ್ಕಾರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡ್ಕ ದೇವಾಡಿಗ ಸಭಾಭವನದ ಬಳಿ ನಡೆದಿದೆ.

ಸುವೀಕ್ಷಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಓದಲು ಹೇಳಿದ್ದಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.