ಉಡುಪಿ: ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಹಳೆ ಪೋಲಿಸ್ ಸ್ಟೇಷನ್ ಬಳಿ ಸಂಭವಿಸಿದೆ.
ಇನ್ನೋವಾ ಕಾರು ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಸ್ಕೂಟಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪಲ್ಟಿಯಾಗಿ ಬಿದ್ದಿದ್ದಾನೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
















