ನಾಳೆ ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ಜುಲೈ 5 ರಂದು ರಂದು ರಜೆ ಘೊಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಮಾಡಿದ್ದಾರೆ.

ನಾಳೆ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಶಾಲೆಗಳಿಂದ ಹಿಡಿದು ಪದವಿ ಪೂರ್ವ ಕಾಲೇಜುಗಳ ತನಕ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.