ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಎರಡು ದಿನ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಅತ್ಯಾಧಿಕ ಮಳೆಯಾಗುವ ಸಂಭವವಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಅಂಗನವಾಡಿ ಕೇಂದ್ರ, ಪದವಿ ಮತ್ತು ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ- 8 ಮತ್ತು 9 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಆದೇಶ ಹೊರಡಿಸಿದ್ದಾರೆ.
ತುರ್ತು ಸೇವೆಗೆ ಟೋಲ್ ಫ್ರೀ ನಂಬರ್ 1077 ಅಥವಾ 080-2574802 ಗೆ ಕರೆ ಮಾಡಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ
ಚಿಕ್ಕಮಗಳೂರು ಭಾಗದಲ್ಲಿ ಈಗಾಗಲೇ ಜುಲೈ 9 ರವರೆಗೆ ರಜೆ ಸಾರಲಾಗಿದೆ.