Home » ಜಿಲ್ಲೆಯಲ್ಲಿ ರೆಡ್ ಅಲರ್ಟ್: ಜುಲೈ 11 ರಂದು ಶಾಲೆಗಳಿಗೆ ರಜೆ
ಜಿಲ್ಲೆಯಲ್ಲಿ ರೆಡ್ ಅಲರ್ಟ್: ಜುಲೈ 11 ರಂದು ಶಾಲೆಗಳಿಗೆ ರಜೆ
ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯ ಮೇರೆಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 11 ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಆದೇಶ ಹೊರಡಿಸಿದ್ದಾರೆ.