ಉಡುಪಿ ಜಿಲ್ಲೆಗೆ ಜುಲೈ 7 ರವರೆಗೂ ಮುಂದುವರಿದ ರಜೆ

ಉಡುಪಿ : ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು , ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು , ಮಳೆ ಮುಂದುವರೆಯುವ ಮುನ್ಸೂಚನೆಯಿರುವುದರಿಂದ ಮುಂಜಾಗರ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:07.07.20123 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ,ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ, ಕಾಲೇಜುಗಳಿಗೆ ರಜೆ ಘೋಷಿಸಿರುವುದಿಲ್ಲ

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಕರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.
1. ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ
2 ಕಠಿಣವಾದ ದಾರಿ ಎಂದರೆ ನೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಸೂಚಿಸಿದೆ.
3 ದುರ್ಬಲ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ.
4. ಈಗ ಮಳೆಗಾಗಿ, ಮುಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶನಿವಾರ ಮಧ್ಯಾಹ್ನ, ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.
5. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ವರ, ವಿದ್ಯಾರ್ಥಿಗಳ ನೀರು ಇರುವ ತಗ್ಗು ವುದೇಶ, ಕರೆ, ನದಿ ತೀರ ಸಮುದ್ರ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.
6 ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
7 ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು.

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ರಜೆ ಘೋಷಣೆ ಮಾಡಿದ್ದಾರೆ.