ಹೊಲಿಗೆ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಜೂನ್ 1: ಉಡುಪಿ ತಾಲೂಕು ಕೇಂದ್ರದ ಬನ್ನಂಜೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಹೊಲಿಗೆ ತರಬೇತಿ ಕೇಂದ್ರವನ್ನು ನಡೆಸಲಾಗುತ್ತಿದ್ದು,  ಕೇಂದ್ರದಲ್ಲಿ ತರಬೇತಿ ಪಡೆಯಲು ಕನಿಷ್ಟ 7 ನೇ ತರಗತಿ ಉತ್ತೀರ್ಣರಾದ ಪ್ರವರ್ಗ 1, 2ಎ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರವರ್ಗ 1 ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ, ಪ್ರವರ್ಗ 2ಎ, 3ಎ, 3ಬಿ ಗೆ ಸೇರಿದ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ರೂ.ಗಳ ಒಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಆದಾಯದ ಮಿತಿ ಇರುವುದಿಲ್ಲ.

ಹೊಲಿಗೆ ತರಬೇತಿಗೆ ಪ್ರವೇಶ ಪಡೆಯ ಬಯಸುವ ಅಭ್ಯರ್ಥಿಗಳು ಜಾತಿ/ ಆದಾಯ ಪ್ರಮಾಣ ಪತ್ರ, ವಿದ್ಯಾಭ್ಯಾಸ 7 ನೇ ಅಥವಾ ಹೆಚ್ಚಿನ ತರಗತಿಯಲ್ಲಿ ಉತ್ತೀರ್ಣರಾದ ಬಗ್ಗೆ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ ಪಡಿತರ ಚೀಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ ಮತ್ತು ಎರಡು ಫೋಟೋಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ, ಉಡುಪಿ ಕಚೇರಿಗೆ ಅಥವಾ ಹೊಲಿಗೆ ತರಬೇತಿ ಕೇಂದ್ರದ ಶಿಕ್ಷಕಿಯವರಿಗೆ ಜೂನ್ 15 ರ ಒಳಗೆ ಸಲ್ಲಿಸಬೇಕು. ನಿಗಧಿತ ಅರ್ಜಿ ನಮೂನೆಯನ್ನು ಉಡುಪಿ ನಗರದ ಬನ್ನಂಜೆಯಲ್ಲಿರುವ ಹೊಲಿಗೆ ತರಬೇತಿ ಕೇಂದ್ರದಿಂದ ಅಥವಾ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0820-2525008 / 0820-2520739 ಅನ್ನು ಸಂಪರ್ಕಿಸುವಂತೆ ಉಡುಪಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.