ಗೃಹ ಸಚಿವ ಬಸವರಾಜ್ ಬೊಮ್ಮಾಯಿಗೆ ಕೊರೊನಾ ಸೋಂಕು ದೃಢ

ಉಡುಪಿ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಸ್ವತಃ ಬೊಮ್ಮಾಯಿ ಅವರೇ ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನೊಬ್ಬನಿಗೆ ಕೊರೊನಾ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ನಾನು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು, ನನಗೂ ಸೋಂಕು ಇರುವುದು ಖಚಿತಗೊಂಡಿದೆ. ಯಾವುದೇ ರೋಗ ಲಕ್ಷಣ ಇಲ್ಲದೆ ಇರುವುದರಿಂದ ಮನೆಯಲ್ಲಿಯೇ ಪ್ರತ್ಯೇಕವಾಗಿ ಕ್ವಾರಂಟೈನ್ ಆಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆ ಒಳಪಡುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಟ್ವೀಟ್ ನಲ್ಲಿ ವಿನಂತಿಸಿದ್ದಾರೆ.