udupixpress
Home Trending ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗೃಹಸಚಿವ ಬೊಮ್ಮಾಯಿ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗೃಹಸಚಿವ ಬೊಮ್ಮಾಯಿ ಭೇಟಿ

ಮಂಗಳೂರು: ರಾಜ್ಯ ಗೃಹ ಸಚಿವರಾದ ಬಸವರಾಜ್‌ ಬೊಮ್ಮಾಯಿ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ದೇವರ ದರ್ಶನದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ದೇಗುಲ ಪ್ರವೇಶಕ್ಕೂ ಮುನ್ನ ಇತರ ಭಕ್ತರಿಗೆ ಥರ್ಮಲ್ ಸ್ಕ್ಯಾನ್ ಮಾಡಿ ದೇವಸ್ಥಾನಕ್ಕೆ ಪ್ರವೇಶ ನೀಡಲಾಯಿತು. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಚಿವ ಬಸವರಾಜ್ ಬೊಮ್ಮಾಯಿ ಅವರ ಜೊತೆಗಿದ್ದರು.
error: Content is protected !!