ಉಡುಪಿ: ಬೆಂಗಳೂರು ಬಾಗಲಗುಂಟೆಯ ಶ್ರೀ ಸಾಯಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ರಾಜ್ಯ ಫಲಾನುಭವಿಗಳ ಪ್ರಕೋಷ್ಠದ ಸಭೆಯಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಂಚಾಲಕರು ಆಗಿರುವ ನೂತನ ಕೇಂದ್ರ ರಾಸಾಯನಿಕ, ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ವತಿಯಿಂದ ಅಭಿನಂದಿಸಲಾಯಿತು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಹಾಗೂ ಮಂಗಳೂರು ವಿಭಾಗ ಪ್ರಭಾರಿ ಅಂಡಾರು ದೇವಿಪ್ರಸಾದ್ ಶೆಟ್ಟಿ ಅವರನ್ನು ಸಚಿವರು ಗೌರವಿಸಿದರು.