ಶೃಂಗೇರಿ ಕೃಷಿ ಇಲಾಖೆಯಲ್ಲಿದೆ ಉದ್ಯೋಗಾವಕಾಶ: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಶೃಂಗೇರಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಶೃಂಗೇರಿ ತಾಲ್ಲೂಕಿನಲ್ಲಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 10 ಕೊನೆಯ ದಿನವಾಗಿರುತ್ತದೆ. ಆಸಕ್ತರು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಇರಬೇಕು. ಈ ಎಲ್ಲಾ ಕ್ವಾಲಿಫಿಕೇಶನ್‌ಗಳು ಇದ್ದ ಅಭ್ಯರ್ಥಿಗಳು ತಡಮಾಡದೇ ಅಪ್ಲೈ ಮಾಡಿ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಆತ್ಮ ವಿಭಾಗದ ಡಿ.ಪಿ.ಡಿ ಪ್ರಿಯಾಂಕ ಜಿ.ಪಿ ಅವರ (ದೂ.ಸಂ. 88147899207) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.