ಉಡುಪಿ: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯದಲ್ಲಿ 2019 ಏಪ್ರಿಲ್ 1 ನೇ ದಿನಾಂಕಕ್ಕಿಂತ
ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ/ ಅಸ್ತಿತ್ವದಲಿರುವ ವಾಹನಗಳು) ದ್ವಿ-ಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಬಾರೀ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್.ಎಸ್.ಆರ್.ಪಿ) ಅಳವಡಿಸುವ ಅವಧಿಯನ್ನು 2024 ರ ಫೆಬ್ರವರಿ 17 ರ ವರೆಗೆ ವಿಸ್ತರಿಸಲಾಗಿದೆ.
ಸಾರ್ವಜನಿಕರು ಆನ್‌ಲೈನ್ ಮೂಲಕ ಹೆಚ್.ಎಸ್.ಆರ್.ಪಿ ಪಡೆಯಲು ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ: 9449863429 ಹಾಗೂ 9449863426 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಾರಿಗೆ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.