ಹೈದರಾಬಾದ್ ಪಾಲಿಕೆ ಚುನಾವಣೆ: ಬಿಜೆಪಿಗೆ ಭಾರಿ ಮುನ್ನಡೆ

ಹೈದರಾಬಾದ್: ಭಾರಿ ಜಿದ್ದಾಜಿದ್ದಿನಿಂದ ಕೂಡಿರುವ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌’ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ.

ಒಟ್ಟು 150 ವಾರ್ಡ್‌ಗಳ ಜಿಎಚ್‌ಎಂಸಿ ಚುನಾವಣೆಗೆ ಡಿ.1ರಂದು ಮತದಾನ ನಡೆದಿತ್ತು. ಕೋವಿಡ್‌ ಹಿನ್ನೆಲೆಯಲ್ಲಿ ಮತಪತ್ರ (ಬ್ಯಾಲೆಟ್ ಪೇಪರ್) ಗಳನ್ನು ಬಳಸಿ ಚುನಾವಣೆ ನಡೆಸಲಾಗಿತ್ತು. ಒಟ್ಟು 1,122 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಹೈದರಾಬಾದ್‌ ಅನ್ನು ಭಾಗ್ಯನಗರವಾಗಿ ಮರುನಾಮಕರಣ ಮಾಡುವ ವಿಚಾರಗಳು, ಹೈದರಾಬಾದ್‌ ಅನ್ನು ನಿಜಾಮ ಸಂಸ್ಕೃತಿಯಿಂದ ಹೊರತರವು ಬಿಜೆಪಿ ಹೇಳಿಕೆಗಳು ಈ ಬಾರಿಯ ಚುನಾವಣೆಯನ್ನು ಕದನಕುತೂಹಲಗೊಳಿಸಿವೆ.

ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌), ಬಿಜೆಪಿ, ಕಾಂಗ್ರೆಸ್‌, ಅಸಾದುದ್ದೀನ್ ಓವೈಸಿಯ ಎಂಐಎಂ ಪಕ್ಷ ಚುನಾವಣಾ ಅಖಾಡದಲ್ಲಿವೆ.

ಟಿಆರ್ ಎಸ್ ಹಿಡಿತದಲ್ಲಿರುವ ಹೈದರಾಬಾದ್ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಲಗ್ಗೆ ಇಡುವ ಮುನ್ಸೂಚನೆ ಗೋಚರಿಸುತ್ತಿದೆ. ಆರಂಭಿಕ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ.
ಟಿಆರ್ ಎಸ್ 35 ಮುನ್ನಡೆ ಸಾಧಿಸಿದರೆ, ಬಿಜೆಪಿ 72, ಎಂಐಎಂ 17
ಕಾಂಗ್ರೆಸ್ 1 ಒಂದು ವಾರ್ಡ್ ನಲ್ಲಿ‌ ಮುನ್ನಡೆ ಸಾಧಿಸಿದೆ.