ಗಾಯಕಿ ಮಂಗ್ಲಿ ಬರ್ತ್ ಡೇ ಪಾರ್ಟಿ ಮಾಡ್ತಿದ್ದ ರೆಸಾರ್ಟ್ ಮೇಲೆ ದಾಳಿ; ಡ್ರಗ್ಸ್ ಪತ್ತೆ, ಹಲವು ಮಂದಿ ವಶಕ್ಕೆ.!

ಹೈದರಾಬಾದ್: ಖ್ಯಾತ ಗಾಯಕಿ ಮಂಗ್ಲಿ ಬರ್ತಡೇ ಪಾರ್ಟಿ ವೇಳೆ ಪೊಲೀಸರು ದಾಳಿ ನಡೆಸಿ, ಮಾದಕ ವಸ್ತು ಸೇವಿಸಿದ್ದ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಎರ್ಲಪಲ್ಲಿರುವ ತ್ರಿಪುರಾ ರೆಸಾರ್ಟ್‍ನಲ್ಲಿ ಮಂಗ್ಲಿ ಅವರ ಬರ್ತಡೇ ಪಾರ್ಟಿ ನಡೆಯುತ್ತಿತ್ತು. ಈ ವೇಳೆ, ಚೆವೆಲ್ಲಾ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಗಾಂಜಾ, ವಿದೇಶಿ ಮದ್ಯ ಪತ್ತೆಯಾಗಿದೆ.

ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೆಡಿಕಲ್ ಟೆಸ್ಟ್‌ನಲ್ಲಿ ಹಲವರು ಮಾದಕ ವಸ್ತು ಸೇವಿಸಿರೋದು ಪತ್ತೆಯಾಗಿದೆ. ಈ ಸಂಬಂಧ ಚೆವೆಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.