ಜಾಮೀನು ಪಡೆಯುವ ಬದಲು ಗಲ್ಲಿಗೇರಲು ಬಯಸುತ್ತೇನೆ: ಉಮಾಭಾರತಿ

ಲಖನೌ: ಅಯೋಧ್ಯೆ ಹೋರಾಟದಲ್ಲಿ ಭಾಗಿಯಾಗಿದ್ದು ಹೆಮ್ಮೆ ಇದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಏನಾಗುತ್ತೆ ಗೊತ್ತಿಲ್ಲ. ಆದರೆ ನಾನು ಜಾಮೀನು ಮಾತ್ರ ಪಡೆಯುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌. ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ಅವರು ಈ ಬಗ್ಗೆ ಉಲ್ಲೇಖಿಸಿದ್ದಾರೆ.
ಈ ಪ್ರಕರಣದಲ್ಲಿ ಜಾಮೀನು ಪಡೆದರೆ ನನ್ನ ಘನತೆಗೆ ಧಕ್ಕೆಯಾಗುತ್ತದೆ. ಹಾಗಾಗಿ ನಾನು ಜಾಮೀನಿನ ಬದಲು ಗಲ್ಲಿಗೇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಸದ್ಯ ಉಮಾಭಾರತಿ ಋಷಿಕೇಶದ ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಇಂದು ಕೋರ್ಟ್ ಹಾಜರಾಗುವುದಿಲ್ಲ ಎಂದು ತಿಳಿದುಬಂದಿದೆ.