ಬೆಳಗಾವಿ: ಸಿದ್ದರಾಮಯ್ಯ ಅವರು 2ನೇ ಅವಧಿಗೆ ಮುಖ್ಯಮಂತ್ರಿ ಆಗಬೇಕೆಂದು ನಾನು ಬಯಸಿದ್ದೆ. ಮೈಸೂರು ಜಿಲ್ಲೆಯ ಹುಣಸೂರಲ್ಲಿ ಚುನಾವಣಾ ಪ್ರಚಾರದಲ್ಲಿ ನಾನೇ ಭಾಷಣ ಮಾಡಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಶುಕ್ರವಾರ ಬೆಳಗಾವಿಯಲ್ಲಿ ಮಾತನಾಡಿದ ಅವರು, 2ನೇ ಬಾರಿಗೆ ನಾನು ಮುಖ್ಯಮಂತ್ರಿ ಆಗುವುದು ನಮ್ಮವರಿಗೇ ಬೇಡವಾಗಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದರು.
ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸಿದವರು ನಾವು. ಯಾವ ದೃಷ್ಟಿಯಲ್ಲಿ ಹೇಳಿಕೆ ನೀಡಿದ್ದಾರೆ, ಆಂತರಿಕವಾಗಿ ಏನಾಯಿತೋ ಗೊತ್ತಿಲ್ಲ ಎಂದರು.
ಸಿದ್ದರಾಮಯ್ಯ ಅವರನ್ನು ಎಲ್ಲರೂ ಬೆಂಬಲಿಸಿದ್ದರಿಂದಲೇ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಸಾಧ್ಯವಾಯಿತು. ಎಸ್.ಎಂ. ಕೃಷ್ಣ ಅವರು ಎರಡು ಕಡೆ ನಿಲ್ಲೋಕೆ ಬಿಟ್ಟಿರಲಿಲ್ಲ ಎಂದು ಹೇಳಿದರು.