ಮಂಗಳೂರು: ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೊಸದಿಲ್ಲಿಯ ಇಂಡಿಯನ್ ಫಾರ್ಮರ್ಸ್ ಫರ್ಟಿ ಲೈಸರ್ ಕೋ-ಆಪರೇಟಿವ್ (ಇಫ್ಕೊ) ಸಂಸ್ಥೆಯ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹೊಸದಿಲ್ಲಿಯಲ್ಲಿ ಮೇ. 10ರಂದು ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ನಡೆದಿತ್ತು. ಪ್ರಸ್ತುತ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿ.ಯ ಅಧ್ಯಕ್ಷರಾಗಿದ್ದಾರೆ. ಅವರು ದೇಶದ ಅತೀ ದೊಡ್ಡ ಸಹಕಾರಿ ಸಂಸ್ಥೆ ಇಫ್ಕೊದಲ್ಲಿ ರಾಜ್ಯದ ಪ್ರತಿನಿಧಿಯಾಗಿದ್ದಾರೆ ಎಂದು ಎಸ್ಸಿಡಿಸಿಸಿ ಬ್ಯಾಂಕ್ನ ಪ್ರಕಟನೆ ತಿಳಿಸಿದೆ.