ನ.24 ರವರೆಗೆ ಕರಾವಳಿ ಸೇರಿದಂತೆ ಕರ್ನಾಟಕದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ನ.24 ರವರೆಗೆ ಕರ್ನಾಟಕದ ಹಲವೆಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.

ಬೆಂಗಳೂರು, ಉಡುಪಿ, ದ.ಕ, ಉ.ಕ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮಂಗಳವಾರದಿಂದ ದಕ್ಷಿಣ ಕರ್ನಾಟಕದ ಮಂಡ್ಯ, ರಾಮನಗರ, ಮೈಸೂರು, ತುಮಕೂರು ಹಾಗೂ ಉತ್ತರ ಕರ್ನಾಟಕದ ವಿಜಯಪುರ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.