ಆ.3 ಮತ್ತು 4 ರಂದು ಬಿರುಗಾಳಿ ಬೀಸುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಉಡುಪಿ: ಆ.3 ಮತ್ತು 4 ರಂದು ಜಿಲ್ಲೆಯ ಹಲವೆಡೆ ಗಂಟೆಗೆ ೩೦ ರಿಂದ ೪೦ ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಾರ್ವಜನಿಕರು ಸಮುದ್ರ, ನದೀ ತೀರ, ಹಳ್ಳ ಕೊಳ್ಳಗಳಲ್ಲಿ ಇಳಿಯುವುದನ್ನು ನಿಷೇಧಿಸಲಾಗಿದೆ. ಅಪಾಯಕಾರಿ ಕಟ್ತಡಗಳು, ಮರಗಳು, ಮತ್ತು ವಿದ್ಯುತ್ ಕಂಬಗಳ ಕೆಳಗೆ ಅಥವಾ ಹತ್ತಿರ ನಿಲ್ಲದೆ ಎಚ್ಚರಿಕೆಯಿಂದ ಇರುವಂತೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಮನವಿ ಮಾಡಿದ್ದಾರೆ.