ಸಂಜೀವಿನಿ ಸ್ವಸಹಾಯ ಸಂಘಗಳ ಸದಸ್ಯರ ಮನೆಯಲ್ಲಿ ದ್ರವ ತ್ಯಾಜ್ಯ ನಿರ್ವಹಣೆ ಅನುಷ್ಠಾನ

ಉಡುಪಿ: ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ), ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಯೋಗದೊಂದಿಗೆ ಜಿಲ್ಲೆಯ ಸುಮಾರು 60,000 ಸಂಜೀವಿನಿ ಸ್ವಸಹಾಯ ಸಂಘಗಳ ಸದಸ್ಯರ ಮನೆಯಲ್ಲಿ ಕಿಚನ್ ಗಾರ್ಡನ್ ಅಥವಾ ಸೋಕ್ ಪಿಟ್ ಮೂಲಕ ದ್ರವ ತ್ಯಾಜ್ಯ ನಿರ್ವಹಣೆಯನ್ನು ಅನುಷ್ಠಾನ ಮಾಡಲಾಗುತ್ತಿದೆ

ಈ ಅಭಿಯಾನದಡಿಯಲ್ಲಿ ಸಂಜೀವಿನಿ ಕುಟುಂಬಗಳಿಂದ ಉದ್ಯೋಗ ಖಾತರಿ ಯೋಜನೆಯಡಿ ಸೋಕ್ ಪಿಟ್ ಹಾಗೂ ಕಿಚನ್ ಗಾರ್ಡನ್ ನಿರ್ಮಾಣಕ್ಕೆ ಅರ್ಜಿ ಸ್ವೀಕರಿಸಿ, ಕುಟುಂಬದ ಅಗತ್ಯತೆಯಂತೆ ಸೋಕ್ ಪಿಟ್ ಅಥವಾ ಕಿಚನ್ ಗಾರ್ಡನ್ ಅಥವಾ ಎರಡನ್ನೂ ಅನುಷ್ಠಾನಗೊಳಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.