ಉಡುಪಿ: ಬಿಜೆಪಿಯ ಯಾವುದೇ ಕಾರ್ಯಕರ್ತ ಸಂಕಷ್ಟದಲ್ಲಿದ್ದಾಗ ಪರಸ್ಪರ ಸಹಾಯ ಹಸ್ತ ಚಾಚುವುದರಿಂದ ಕಾರ್ಯಕರ್ತರ ಮನೋಸ್ಥೆರ್ಯ ವೃದ್ದಿಯಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಕಾಪು ವಿಧಾನಸಭಾ ಕ್ಷೇತ್ರದ ಬೊಮ್ಮಾರಬೆಟ್ಟು ಗ್ರಾಮದ ಹಿರಿಯಡಕದಲ್ಲಿ ನಡೆದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಸುದೈವ ಕುಟುಂಬಕಂ’ ತತ್ವದಲ್ಲಿ ನಂಬಿಕೆ ಇರಿಸಿರುವ ಬಿಜೆಪಿ ಸ್ವತ: ಒಂದು ಕುಟುಂಬವಿದ್ದಂತೆ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಒಂದೇ ಕುಟುಂಬದ ಸದಸ್ಯನಿದ್ದಂತೆ. ಕುಟುಂಬದ ಸರ್ವ ಸದಸ್ಯರ ಯೋಗ ಕ್ಷೇಮ ಕುಟುಂಬದಲ್ಲಿ ಆರೋಗ್ಯಕರ ವಾತಾವರಣ ಮೂಡಿಸುತ್ತದೆ. ಬಿಜೆಪಿ ಕುಟುಂಬ ಮಿಲನ ಕಾರ್ಯಕರ್ತರೊಳಗಿನ ಸುಮಧುರ ಬಾಂಧವ್ಯವನ್ನು ಇನ್ನಷ್ಟು ಸದೃಢಗೊಳಿಸುವ ಜೊತೆಗೆ ಪಕ್ಷ ಸಂಘಟನೆಗೆಗೂ ಒತ್ತು ನೀಡಲಿದೆ ಎಂದು ಅವರು ಹೇಳಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕ ರಘುರಾಮ್ ಕುಟುಂಬ ಪ್ರಬೋಧನ್ ಬಗ್ಗೆ ಬೌದ್ಧಿಕ್ ನಡೆಸಿಕೊಟ್ಟರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಯಶ್ಪಾಲ್ ಸುವರ್ಣ, ಗೀತಾಂಜಲಿ ಸುವರ್ಣ, ಬಿಜೆಪಿ ಮುಖಂಡ ಸುರೇಶ್ ಶೆಟ್ಟಿ ಗುರ್ಮೆ, ಪೂರ್ಣಿಮಾ ಸುರೇಶ್ ನಾಯಕ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಕಾರ್ಯದರ್ಶಿ ಸುನೀತಾ ನಾಯ್ಕ್, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್.
ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಉಪಾಧ್ಯಕ್ಷ ಹರೀಶ್ ಸಾಲ್ಯಾನ್, ಉಡುಪಿ ತಾ.ಪಂ. ಅಧ್ಯಕ್ಷೆ ಸಂಧ್ಯಾ ಕಾಮತ್, ಕಾಪು ತಾ.ಪಂ. ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಕಾಪು ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್, ಹಿರಿಯಡ್ಕ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸಂದೀಪ್ ಶೆಟ್ಟಿ, ಶಕ್ತಿಕೇಂದ್ರ ಅಧ್ಯಕ್ಷ ಉಮೇಶ್ ಶೆಟ್ಟಿ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮಾಜಿ ಗ್ರಾ.ಪಂ. ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.