ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ ಪ್ರಯುಕ್ತ ಪ್ರತಿಭಾನ್ವಿತರ ಅಭಿನಂದನಾ ಕಾರ್ಯಕ್ರಮ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಐ.ಟಿ.ಡಿ.ಪಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ
ಕೊರಗ ಸಂಘಟನೆ ಉಡುಪಿ ಇವರ ಸಹಯೋಗದೊಂದಿಗೆ ‘ದಿ. ಪಳ್ಳಿ ಗೋಕುಲ್ ದಾಸ್ ಸಂಸ್ಮರಣೆ, 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ, ಮಕ್ಕಳ ಮಾನಸಿಕ ಆರೋಗ್ಯದ ಕುರಿತು ಆತ್ಮ ಸಮಾಲೋಚನೆ ಹಾಗೂ ಎಸ್.ಎಸ್.ಎಲ್.ಸಿ ನಂತರ ಮುಂದೇನು ಎಂಬ ವಿಷಯದ ಕುರಿತ ಮಾಹಿತಿ ಕಾರ್ಯಾಗಾರವು ಶನಿವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್,
ಉಡುಪಿ ನಗರ ಸಭೆಯ ನಾಮ ನಿರ್ದೇಶಿತ ಸದಸ್ಯೆ ಸುಬೇದಾ, ಎ.ವಿ ಬಾಳಿಗಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಸೌಜನ್ಯ ಶೆಟ್ಟಿ, ಐ.ಟಿ.ಡಿ.ಪಿ ಅಧಿಕಾರಿ ದೂದ್ ಪೀರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ಸಮನ್ವಯಾಧಿಕಾರಿ ಚಂದ್ರ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಕೊರಗ ಸಮುದಾಯದ ಮುಖಂಡ ಬಾಬು ಪಾಂಗಾಳ ಉಪಸ್ಥಿತರಿದ್ದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ಕೊರಗ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.