ಏಪ್ರಿಲ್ 30 ರಂದು ನವೋದಯ ಪ್ರವೇಶ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಉಡುಪಿ: ಪ್ರಸಕ್ತ ಸಾಲಿನ ನವೋದಯ ವಿದ್ಯಾಲಯ ಸಂಸ್ಥೆಯ 6 ನೇ ತರಗತಿ ಪ್ರವೇಶಾತಿ ಪರೀಕ್ಷೆಯು ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 30 ರಂದು ನಡೆಯಲಿದ್ದು, ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಯಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು, ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2.30 ರ ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿರುತ್ತಾರೆ.