ನಾಳೆ ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ನೂತನ ಹವಾನಿಯಂತ್ರಿತ “ಸಹಕಾರ ಸೌರಭ” ಕಟ್ಟಡದ ಉದ್ಘಾಟನೆ ಸಮಾರಂಭ

ಉಡುಪಿ: ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ಸಂಪೂರ್ಣ ಹವಾನಿಯಂತ್ರಿತ ನೂತನ ಸಹಕಾರ ಸೌರಭ ಕಟ್ಟಡ, ಸಭಾಭವನ, ಗೋದಾಮು ಕಟ್ಟಡ ಆಡಳಿತ ಮಂಡಳಿ ಕಚೇರಿ ಕಟ್ಟಡವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಮತ್ತು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಮೇ.21 ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ.

ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಮತ್ತು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ರಾಜೇಶ್ ರಾವ್ ಪಾಂಗಾಳ ಅಧ್ಯಕ್ಷತೆಯನ್ನು ವಹಿಸುವರು.

ಗೋದಮು ಕಟ್ಟಡವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಡಳಿತ ಕಚೇರಿಯನ್ನು ಮಾಜಿ ಶಾಸಕ ಲಾಲಾಜಿ ಮೆಂಡನ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಲಿದ್ದಾರೆ.

ವಾಹನ ನಿಲುಗಡೆ ಸ್ಥಳವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಮತ್ತು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬಿಳುಪು, ಗೋದಾಮು ಕೊಠಡಿಯನ್ನು ನಬಾರ್ಡ್ ಎಜಿಎಂ ಸಂಗೀತ ಕರ್ತಾ, ವಿಶ್ರಾಂತಿ ಕೊಠಡಿಯನ್ನು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಹಾಯಕ ನಿಬಂಧಕ ಅರುಣ್ ಕುಮಾರ್, ಸಾಯಿರಾಧ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಮನೋಹರ್ ಶೆಟ್ಟಿ ಉದ್ಘಾಟಿಸಲಿರುವರು‌.

ಗ್ರಾ.ಪಂ.ಅಧ್ಯಕ್ಷೆ ಇನ್ನಂಜೆ ಮಲ್ಲಿಕಾ ಆಚಾರ್ಯ, ಗ್ರಾ.ಪಂ.ಅಧ್ಯಕ್ಷ ಕುರ್ಕಾಲು ಮಹೇಶ್ ಶೆಟ್ಟಿ ಬಿಳಿಯಾರು, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಅಶೋಕ್ ಕುಮಾರ್ ಶೆಟ್ಟಿ ಉಡುಪಿ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂಘವು ಕಳೆದ 69 ವರ್ಷಗಳಿಂದ ಸಹಕಾರಿ ಕ್ಷೇತ್ರಗಳ ಮೂಲಕ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಾ ಸರಕಾರದ ಸವಲತ್ತುಗಳನ್ನು ಸಂಘದ ಸದಸ್ಯರಿಗೆ ತಲುಪಿಸುವ ಸೇವೆ ಸಲ್ಲಿಸುತ್ತಾ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.

ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘವು ಇನ್ನಂಜೆ ಗ್ರಾಮದ ಪ್ರಪ್ರಥಮ ಹವಾ ನಿಯಂತ್ರಿತ ಸಭಾಭವನ ನಿರ್ಮಿಸಿ, ಲೋಕಾರ್ಪಣೆಗೊಳಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ರಾಜೇಶ್ ರಾವ್ ಪಾಂಗಾಳ, ಉಪಾಧ್ಯಕ್ಷ ಚಂದ್ರಹಾಸ್ ಶೆಟ್ಟಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವೈಶಾಲಿ ಶೆಟ್ಟಿ ಹಾಗೂ ಆಡಳಿತ ಮಂಡಳಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.