ಉಡುಪಿ: ಜೂನ್ 12 ಭಾನುವಾರದಂದು ಬೆಳಿಗ್ಗೆ 11 ಗಂಟೆಗೆ “ಯು-ಆಕ್ಟ್” (ಉಡುಪಿ-
ಅಡ್ವೊಕೆಸಿ ಆಫ್ ಕನ್ಸ್ಯುಮರ್ಸ್ ಆಂಡ್ ಸಿಟಿಜನ್ಸ್) ವೇದಿಕೆಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟಕರಾಗಿ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀ ಶಾಂತವೀರ ಶಿವಪ್ಪರವರು ಆಗಮಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಶ್ರೀಮತಿ ಶರ್ಮಿಳಾ ಎಸ್, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ವಿಷ್ಣುವರ್ಧನ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬಿ.ಸೋಮನಾಥ ಹೆಗ್ಡೆ, ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ , ಹಿರಿಯ ವಕೀಲ ಸಿ.ವಿಜಯ್ ಹೆಗ್ಡೆ, ವಿ.ಬಿ. ಕಾನೂನು ಕಾಲೇಜು ಪ್ರಾಂಶುಪಾಲೆ ಡಾ.ನಿರ್ಮಲ ಕುಮಾರಿ, ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯದರ್ಶಿ ನಜೀರ್ ಪೊಲ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.