ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎ.ಎಸ್.ಎಂ.ಇ ವಿದ್ಯಾರ್ಥಿ ಘಟಕದ ಉದ್ಘಾಟನೆ

ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ “ದಿ ಅಮೇರಿಕನ್ ಸೊಸೈಟಿ ಆಫ್ ಮೆಕ್ಯಾನಿಕಲ್ ಇಂಜಿನಿಯರ್ಸ್ (ಎ.ಎಸ್.ಎಂ.ಇ) ವಿದ್ಯಾರ್ಥಿ ಘಟಕದ ಉದ್ಘಾಟನೆಯು ದಿನಾಂಕ 11 ಎಪ್ರಿಲ್ 2026ರಂದು ಸಂಸ್ಥೆಯ ಆವರಣದಲ್ಲಿ ನಡೆಯಿತು.

ಈ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕರಾದ ಡಾ ಸತ್ಯಶಂಕರ ಶರ್ಮಾ ಇವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ರಾಧಾಕೃಷ್ಣ ಎಸ್ ಐತಾಳ್ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಎ. ಎಸ್. ಎಂ. ಇ ವಿದ್ಯಾರ್ಥಿ ಘಟಕದ ಸಂಯೋಜಕರಾದ ಸುಧೀರ್ಸದಸ್ಯತ್ವವನ್ನು ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು.

ಮುಖ್ಯ ಅತಿಥಿಗಳಾದ ಡಾ. ಸತ್ಯಶಂಕರ ಶರ್ಮಾ ಇವರು ಮಾತನಾಡಿ ಉದ್ಯಮಶೀಲ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಎ.ಎಸ್.ಎಂ.ಇ ಸದಸ್ಯತ್ವದ ಉಪಯೋಗವನ್ನು ಉತ್ತಮ ರೀತಿಯಲ್ಲಿ ಪಡೆಯುವಂತೆ ಸಲಹೆ ನೀಡಿದರು.ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಾಗರಾಜ ಭಟ್ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳಾದ ಡಾ. ರಾದಾಕೃಷ್ಣ ಎಸ್ ಐತಾಳ್ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ರಾಜ ಯತೀಶ್ ಯಾದವ್ ನೆರೆದ ಎಲ್ಲರನ್ನು ಸ್ವಾಗತಿಸಿದರು. ಡಾ. ಮಂಜುನಾಥ ಎಸ್ ಪ್ರಾರ್ಥಿಸಿದರು. ಶ್ರೀ ಸುಧೀರ್ ವಂದಿಸಿದರು ಶ್ರೀ ಅನಂತ ಮೋಹನ್ ಮಲ್ಯ ಕಾರ್ಯಕ್ರಮವನ್ನು ನಿರೂಪಿಸಿದರು.