ಕಾಪು: ನಾಳೆ(ಡಿ.30) ಮೀನು ಮಾರಾಟ ಫೆಡರೇಶನ್ ನ ಬ್ಯಾಂಕಿಂಗ್ ವಿಭಾಗ ಹಾಗೂ ಮತ್ಸ್ಯ ಕ್ಯಾಂಟೀನ್ ಉದ್ಘಾಟನೆ

ಕಾಪು: ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನ ಕಾಪು ಶಾಖೆಯ ಬ್ಯಾಂಕಿಂಗ್ ವಿಭಾಗ ಮತ್ತು ಮತ್ಸ್ಯ ಕ್ಯಾಂಟೀನ್ ಇದರ ಉದ್ಘಾಟನೆಯು ಡಿ.30 ರಂದು ಮಧ್ಯಾಹ್ನ 3 ಗಂಟೆಗೆ ಕಾಪು ತಾಲೂಕು ಕಚೇರಿ ಬಳಿಯ ಮತ್ಸ್ಯ ಸೌಧದಲ್ಲಿ ಜರಗಲಿದೆ ಎಂದು ಫೆಡರೇಶನ್ ನ ಅಧ್ಯಕ್ಷ, ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ಡಾ.ಜಿ.ಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಬ್ಯಾಂಕಿಂಗ್ ವಿಭಾಗವನ್ನು ಉದ್ಘಾಟಿಸಲಿದ್ದಾರೆ. ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ. ಶಾಸಕ ಯಶ್ ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.